ಸುದ್ದಿ ಕನ್ನಡ ವಾರ್ತೆ
ರಾಮನಗರ: 14 ವರ್ಷ ವಯೋಮಿತಿಯ ಶಿರಸಿ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಜೋಯಿಡಾ ತಾಲೂಕಿನ ರಾಮನಗರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ಆರಾಧ್ಯ ಹಣಬರ ಹಾಗೂ ಗೀತಾಂಜಲಿ ಮರೆದ್ ಅವರು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಬಸಪ್ಪ ಮಲ್ಲೂರ್, ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ ಬಿರನಹೋಳಿ ಹಾಗೂ ಶಾಲೆಯ ಶಿಕ್ಷಕ ವೃಂದ ಅಭಿನಂದನೆಗಳನ್ನು ಸಲ್ಲಿಸಿ, ರಾಜ್ಯ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.
