ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ತಾಲೂಕಿನ ಬಳಗಾರ ಕ್ರಾಸ್ ಬಳಿ ನಡೆದಿದೆ.
ಇದೇ ಸ್ಥಳದಿಂದ ಇನ್ನೊಂದು ಕಿಲೋಮೀಟರ್ ಅಂತರದಲ್ಲಿ ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಹೆದ್ದಾರಿ ಪಕ್ಕದ ಗಟಾರದಲ್ಲಿ ಬಿದ್ದಿದೆ. ಇದೇ ವೇಳೆ ಮಳೆಯೂ ಜೋರಾಗಿದ್ದು, ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಕಿಲೋಮೀಟರ್ ಗಟ್ಟಲೇ ಎರಡೂ ಕಡೆ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಸಿದ್ದು ಗುಡಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.
