ಸುದ್ದಿ ಕನ್ನಡ ವಾರ್ತೆ
​ಯಲ್ಲಾಪುರ: ತಾಲೂಕಿನ ಗೇರಗದ್ದೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

​ಕಣ್ಣಿಮನೆ ಕ್ರಾಸ್‌ನಿಂದ ಯಲ್ಲಾಪುರದ ಕಡೆಗೆ ಕಾರು ಸಾಗುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ​ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ.
​ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಉಂಟಾಗಿಲ್ಲ.

​ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.
​ಸ್ಥಳಕ್ಕೆ ಬಂದ ಪೊಲೀಸರು ಅಪಘಾತಗೊಂಡ ವಾಹನಗಳ ತೆರವಿಗೆ ಕ್ರಮ ಕೈಗೊಂಡು ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.