ಸುದ್ದಿ ಕನ್ನಡ ವಾರ್ತೆ

ಜೋಯಿಡಾ ದ ರಾಮನಗರದ ಬಿ.ಜಿ.ವಿ. ಎಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ್ದಾರೆ.

ದಿನಾಂಕ 23-09-2026 ರಂದು ಕುಮಟಾದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾ ಕೂಟದಲ್ಲಿ ಗುಪು ಆಟ ಟೆನ್ನಿಕ್ವೈಟ್ ಪಂದ್ಯಾವಳಿಯಲ್ಲಿ ಬಿ.ಜಿ.ವಿ.ಎಸ್ ಪ.ಪೂ ಕಾಲೇಜು ರಾಮನಗರದ (ಉ.ಕ) ಬಾಲಕರ ತಂಡ – ಆಯಾನ ಜಿ ಪಾಷಾ, ವಿರಾಜ್ ಮೀರಾಶಿ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ಯೋಗಿತಾ ವಿ.ಕೆ , ಗಂಗೂ ಡಿ . ಎಲ್ ತಂಡ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದೆ. ರಾಜ್ಯ ಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಸಾಧನೆ ಮಾಡಿದ್ದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಇವರ ಸಾಧನೆಗೆ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಕಾರವಾರ ಅಧ್ಯಕ್ಷರು ಶ್ರೀಮತಿ ವನಿತಾ ಪ್ರಭಾಕರ ರಾಣೆ, ಶ್ರೀ ಉಲ್ಲಾಸ ನಾಯ್ಕ ಉಪಾಧ್ಯಕ್ಷರು, ಶ್ರೀ ಮಂಜುನಾಥ ಪವಾರ್ ಕಾರ್ಯದರ್ಶಿ, ಶ್ರೀ ಕಿಶೋರ ರಾಣೆ ಜಂಟಿ ಕಾರ್ಯದರ್ಶಿ. ಶ್ರೀ ಗಜೇಂದ್ರ ಗಾಂದಲೆ ಸ್ಥಳೀಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಶ್ರೀ ರಾಜೇಶ ಪಿ . ದೇಸಾಯಿ, ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀ ಸಂಜಯ ಜಿ. ಗೌಡ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಶುಭವನ್ನು ಹಾರೈಸಿರುತ್ತಾರೆ.