ಸುದ್ದಿ ಕನ್ನಡ ವಾರ್ತೆ
​ಶಿರಸಿ: ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಶ್ರೀ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ ಚಾತುರ್ಮಾಸ್ಯ ವ್ರತಾಚರಣೆಯನ್ನು ಸಂಪನ್ನಗೊಳಿಸಿದರು.

​ವ್ರತದ ಸಮಾರೋಪದ ಅಂಗವಾಗಿ ಉಭಯ ಶ್ರೀಗಳು ಶನಿವಾರ ಪವಿತ್ರ ಶಾಲ್ಮಲಾ ನದಿಯ ತೀರದಲ್ಲಿ ಶಾಸ್ತ್ರೋಕ್ತವಾಗಿ ಗಂಗಾ ಪೂಜೆಯನ್ನು ನೆರವೇರಿಸಿದರು.
​ಜಲದೇವತೆಯಾದ ಗಂಗೆಯ ಅನುಗ್ರಹಕ್ಕಾಗಿ ಪ್ರಾರ್ಥಿಸಿದ ನಂತರ ಸಾಂಪ್ರದಾಯಿಕವಾಗಿ ಸೀಮೋಲ್ಲಂಘನ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

​ಈ ಧಾರ್ಮಿಕ ವಿಧಿಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾಧಿಗಳು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದರುನದೀ ಪೂಜೆ ಹಾಗೂ ಸೀಮೋಲ್ಲಂಘನದ ಪವಿತ್ರ ಕಾರ್ಯಕ್ರಮಗಳು ಮುಕ್ತಾಯಗೊಂಡ ಬಳಿಕ, ಉಭಯ ಶ್ರೀಗಳು ಸೋಂದಾದ ಐತಿಹಾಸಿಕ ಹಾಗೂ ಪುರಾತನ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ಪೂಜೆ ಸಲ್ಲಿಸಿ ಶ್ರೀ ಸದಾಶಿವ ದೇವರ ದರ್ಶನ ಪಡೆದರು ದೇವಸ್ಥಾನಗಳಲ್ಲಿ ವಿಶೇಷ ಅರ್ಚನೆ, ಮಂಗಳಾರತಿ ನೆರವೇರಿಸಿ, ನಾಡಿನ ಕ್ಷೇಮಾಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.