ಸುದ್ದಿ ಕನ್ನಡ ವಾರ್ತೆ
ಶಿರಸಿ: ಮಹದಾಯಿ ಹೋರಾಟಕ್ಕೆ ಸಂಬಂಧಿಸಿದಂತೆ 2013ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಾರಂಟ್ ಆಧರಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಶಿರಸಿಯಲ್ಲಿ ಬಂಧಿಸಿದ್ದಾರೆ.

 

2013ರಲ್ಲಿ ಕಳಸಾ–ಬಂಡೂರಿ ನಾಲಾ ಯೋಜನೆ ಹಾಗೂ ಮಹದಾಯಿ ನದಿ ನೀರಿನ ವಿಚಾರವಾಗಿ ಉತ್ತರ ಕರ್ನಾಟಕದಲ್ಲಿ ರೈತ ಸಂಘಟನೆಗಳ ನೇತೃತ್ವದಲ್ಲಿ ಹಲವು ಹೋರಾಟಗಳು ನಡೆದಿದ್ದವು.
ಈ ಹೋರಾಟದ ಸಂದರ್ಭಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು ಎನ್ನಲಾಗಿದ್ದು, ಅದರಂತೆ ಹುಬ್ಬಳ್ಳಿ ಪೊಲೀಸರು ಶಿರಸಿಗೆ ಆಗಮಿಸಿ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಅವರು ಈ ಹಿಂದೆ ಕೂಡ ರೈತ ಹಾಗೂ ಮಹದಾಯಿ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಎಂಬುದು ಉಲ್ಲೇಖನೀಯ.