ಸುದ್ದಿ ಕನ್ನಡ ವಾರ್ತೆ

ಜೊಯಿಡಾ :ನಂದಿಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಗದ್ದೆ ಗ್ರಾಮ ಪಂಚಾಯತ್ ಕಾರ್ಯಾಲಯದಿಂದ ಗ್ರಾಮದಲ್ಲಿ ಮತ್ತು ವಲಯ ಅರಣ್ಯಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಕಾನೇರಿ ವರೆಗೆ, ‘ಸ್ವಚ್ಛತಾ ಹೀ ಸೇವಾ’ ಅಭಿಯಾನದಡಿ ಸ್ವಚ್ಛತೆ ಮಾಡಿದರು.

 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಆಡಳಿತಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು/ ಉಪಾಧ್ಯಕ್ಷರು/ ಸದಸ್ಯರು , ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ,ಸದಸ್ಯರು,ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ವಲಯ ಅರಣ್ಯಾಧಿಕಾರಿಗಳು,ಸಿಬ್ಬಂದಿಗಳು ಹೆಸ್ಕಾಂ ಸಿಬ್ಬಂದಿಗಳು , ಗ್ರಾಮಸ್ಥರು ಸಾರ್ವಜನಿಕರು ಇತರರು ಇದ್ದರು.