ಸುದ್ದಿ ಕನ್ನಡ ವಾರ್ತೆ
ಕುಮಟಾ; ಉತ್ತರ ಕನ್ನಡ ಜಿಲ್ಲೆಯ ದೇವಿಮನೆ ಘಟ್ಟದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಕಂದಕಕ್ಕೆ ಉರುಳಿದ್ದು 12 ಜನ ಪ್ರಯಾಣಿಕರು ಗಂಭೀರಕಾಯಿ ಗೊಂಡಿದ್ದಾರೆ.
ಈ ಬಸ್ ಗುರುವಾರ ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ದೇವಿಮನೆಗಟ್ಟ ಮಾರ್ಗವಾಗಿ ಸಂಚರಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ದೇವಿ ಮನೆ ಘಟ್ಟದಲ್ಲಿ ಭೀಕರ ಅಪಘಾತಕೀಡಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ 12 ಜನ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಮಟಾ ಪೊಲೀಸ್ ಅಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಪೊಲೀಸರ ತನಿಕೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
