ಸುದ್ದಿ ಕನ್ನಡ ವಾರ್ತೆ
ಅಂಕೋಲಾ; ತಾಲೂಕಿನ ಹೆಗ್ಗಾರ್ ಸರ್ಕಾರಿ ಪ್ರಾಥಮಿಕ ಶಾಲೆಯ ಅಡಿಗೆ ಕೋಣೆಯಲ್ಲಿ ಕಳ್ಳತನ ನಡೆದಿದೆ. ಕಳ್ಳನು ಕಿಡಕಿಯ ರಾಡ್ ಮುರಿದು ಒಳ ಪ್ರವೇಶಿಸಿ ವಿವಿಧ ವಸ್ತುಗಳನ್ನು ದೋಚಿರುವ ಘಟನೆ ನಡೆದಿದೆ.
ಶಾಲೆಯಲ್ಲಿ ಬಿಸಿಯೂಟದ ವ್ಯವಸ್ಥೆ ಮಾಡುವ ಅಡುಗೆ ಕೋಣೆಯನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿರುವ ಬಗ್ಗೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಪದೇಪದೇ ಕಳ್ಳತನ ಹೆಚ್ಚಾಗುತ್ತಿದ್ದು ಪೊಲೀಸರು ಕಠಿಣ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸರಣಿ ಕಳ್ಳತನ ನಡೆಸುತ್ತಿರುವ ಆರೋಪಿಯನ್ನು ಕೂಡಲೇ ಬಂಧಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
