Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಜಿಲ್ಲಾ ಪಂಚಾಯತ ಉತ್ತರಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹನುಮಾನ ಲೇನ ರಾಮನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೋಯಿಡಾ ತಾಲೂಕ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ 2025 – 26 ರ ಕಿತ್ತೂರು ರಾಣಿ ಚೆನ್ನಮ್ಮ ರಾಮನಗರ ವಸತಿ ಶಾಲೆಯ ವಿದ್ಯಾರ್ಥಿಗಳು ಥ್ರೋ ಬಾಲ್ ಮತ್ತು ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Banner Ad

ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ,ಚೇತಾಲಿ ವೇಳಿಪ 400 ಮೀಟರ ಮೀಟರ ಓಟದ ಸ್ಪರ್ಧೆಯಲ್ಲಿ ದ್ವಿತೀಯ,ಯಾಸ್ಮಿನ್ ನಾಯ್ಕ ಚಕ್ರ ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಇವರ ಸಾಧನೆಗೆ ಪ್ರಾಂಶುಪಾಲರಾದ ಬಸಪ್ಪ ಎಂ, ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ ಬೀರನಹೊಳಿ,ಸಹ ಶಿಕ್ಷಕರು ಪಾಲಕರು,ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Banner Ad