ಸುದ್ದಿ ಕನ್ನಡ ವಾರ್ತೆ
KSRTC ಬಸ್ ಕಂಡಕ್ಟರ್ ಮತ್ತು ಚಾಲಕರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ .
KSRTC ಬಸ್ಸಿಗೆ ದಾರಿ ಬಿಡುವ ವಿಚಾರವಾಗಿ ರಸ್ತೆ ಮಧ್ಯದಲ್ಲಿ ಬಾರಿ ಜಗಳ ಉಂಟಾಗಿತ್ತು. ಈ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಈ ಕೃತ್ಯಕ್ಕೆ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ಟೋಬರ್ ಒಂದರಂದು ನಾಣಿಕಟ್ಟ ಬಸ್ ನಿಲ್ದಾಣದಲ್ಲಿ ಸಿಬ್ಬಂದಿಗಳ ಮೇಲೆ ಕಬ್ಬಿಣದ ಜಾಕ್ ನಿಂದ ಹಲ್ಲೆ ನಡೆಸಿ, ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಹಿನ್ನೆಲೆಯಲ್ಲಿ ಆರೋಪಿಗಳಾದ , ಸಂದೀಪ್ ವಾಲ್ಮೀಕಿ, ಸೈಫ್ ಅಲಿ ಸೈಯದ್, ಹರ್ಷವರ್ಧನ್ ನಾಯ್ಕ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
