Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಜಿಲ್ಲಾ ಪಂಚಾಯತ ಉತ್ತರಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹನುಮಾನ್ ಲೇನ ರಾಮನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೋಯಿಡಾ ತಾಲೂಕ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ 2025 – 26 ರ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ನಂದಿಗದ್ದೆ ಶಾಲೆಯ ಬಾಲಕರು ಥ್ರೋ ಬಾಲ್ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Banner Ad

ಇವರ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಾಲಕರು,ಪೋಷಕರು,ಗಣ್ಯರು, ಶಿಕ್ಷಣ ಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Banner Ad