Banner Ad

ಸುದ್ದಿ ಕನ್ನಡ ವಾರ್ತೆ

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಸದಸ್ಯ ಸ್ಥಾನಗಳ ಮೀಸಲಾತಿ ಇದೀಗ ಪ್ರಕಟವಾಗಿದೆ.

Banner Ad

ಉತ್ತರ ಕನ್ನಡ ಜಿಲ್ಲೆಯ 53 ಜಿಲ್ಲಾ ಪಂಚಾಯತ್ ಸ್ಥಾನಗಳ ಪೈಕಿ 27 ಸ್ಥಾನಗಳು ಮಹಿಳೆಯರಿಗೆ ಮೀಸಲು, 118 ತಾಲೂಕ ಪಂಚಾಯತ್ ಸ್ಥಾನಗಳ ಪೈಕಿ 65 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಇದರಿಂದಾಗಿ ಪ್ರಸಕ್ತ ಜಿಲ್ಲಾ ಪಂಚಾಯತ್ ಹಾಗೂ ತಾಲೂಕಾ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮಹಿಳೆಯರಿಗೆ ಉತ್ತಮ ಅವಕಾಶ ಲಭಿಸಿದಂತಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿನಿಯಮದ ಅಡಿಯಲ್ಲಿ ಮೀಸಲಾತಿ ನಗರ ಪಡಿಸಿದೆ.

ಮೀಸಲಾತಿ ಪ್ರಕಟವಾಗುತ್ತಿದ್ದಂತೆಯೇ ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಆಯ್ಕೆ ಚುರುಕುಗೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಹೆಚ್ಚಿನ ಮೀಸಲಾತಿ ಸ್ಥಾನ ಲಭಿಸಿರುವುದು ಪ್ರಸಕ್ತಬಾರಿ ನಡೆಯಲಿರುವ ಚುನಾವಣೆಯಲ್ಲಿ ಸಂಬಂಧಿಸಿದಂತೆ ಹೆಚ್ಚಿನ ಕುತೂಹಲ ಮೂಡಿಸಿದೆ.

Banner Ad