Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಜಿಲ್ಲಾ ಪಂಚಾಯತ ಉತ್ತರಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹನುಮಾನ್ ಲೇನ ರಾಮನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೋಯಿಡಾ ತಾಲೂಕ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ 2025 – 26 ರ ಸರ್ಕಾರಿ ಪ್ರೌಢಶಾಲೆ ಗುಂದದ ವಿದ್ಯಾರ್ಥಿಗಳಾದ ದರ್ಶನ ರಾಯಕರ 80 ಮೀ ಹರ್ಡಲ್ಸ ಹಾಗೂ 400 ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಸಿಲ್ವನ್ ಪೆರೇರಾ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಜೋಸೆಫ್ ಸರ್, ದೈಹಿಕ ಶಿಕ್ಷಣ ಶಿಕ್ಷಕರಾದ ಫಕೀರಪ್ಪ ದರಿಗೊಂಡ,ಸಹ ಶಿಕ್ಷಕರಾದ ನವೀನ ಶೇಟ್, ಗೋಕುಲ ಎಸ್,ಪುರುಷೋತ್ತಮ,ದಿವ್ಯಾ ಮೇಡಂ,ರೀಯಾ,ಬಸವರಾಜ ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು,ಪಾಲಕರು,ಪೋಷಕರು,ಗಣ್ಯರು,ಶಿಕ್ಷಣ ಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Banner Ad
Banner Ad