Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ, ಅಕ್ಟೋಬರ್ 9: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಇಂದು ಜೋಯಿಡಾದ ಗಾವಡಿವಾಡಾ ಕೃಷ್ಣಮೂರ್ತಿ ಹಾಲ್‌ನಲ್ಲಿ ಭಾರತೀಯ ಜನತಾ ಪಾರ್ಟಿಯ ಘಟನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು.

Banner Ad

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರಾದ ಸುನಿಲ್ ವಿ. ಹೆಗಡೆ ಅವರು, ಪಕ್ಷದ ಘಟನಾಯಕರು ಪ್ರತಿಯೊಬ್ಬ ಮತದಾರರನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ಎನ್‌ಡಿಎ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತಗಳು ಲಭಿಸುವಂತೆ ಕಾರ್ಯನಿರ್ವಹಿಸಬೇಕು ಎಂದು ಮಾರ್ಗದರ್ಶನ ನೀಡಿದರು.

ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸಿ, ಮತದಾರರನ್ನು ಸಂಪರ್ಕಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಹೆಚ್ಚಿನ ವೇಗ ನೀಡಬೇಕು ಎಂದು ತಿಳಿಸಿದರು.

ಈ ಸಭೆಯಲ್ಲಿ ಜೋಯಿಡಾ ತಾಲೂಕು ಬಿಜೆಪಿ ಅಧ್ಯಕ್ಷ ಶಿವಾಜಿ ಗೋಸಾವಿ, ಜೋಯಿಡಾ ಮಂಡಲದ ಪ್ರಭಾರಿ ಸುಧಾಕರ್ ರೆಡ್ಡಿ, ಮಾಜಿ ಅಧ್ಯಕ್ಷ ಸಂತೋಷ್ ರೆಡ್ಕರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಎಲ್ಲೇಕರ, ಪ್ರಧಾನ ಕಾರ್ಯದರ್ಶಿ ಅರುಣ್ ಕಾಮ್ರೇಕರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಿದ್ದು ಜೊಕೇರಿ ಗಿರೀಶ್ ಗೊಸಾವಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Banner Ad