ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ಸಭಾಭವನದಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಆದಿ ಕರ್ಮಯೋಗಿ ಕಾರ್ಯಕ್ರಮ ಹಾಗೂ ದೂರದೃಷ್ಟಿ ಗ್ರಾಮ ಕ್ರಿಯಾ ಯೋಜನೆ ವಿಶೇಷ ಗ್ರಾಮಸಭೆ ನಡೆಯಿತು.

ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು ಪಂಚಾಯತ ಅಧಿಕಾರಿ,ಸಿಬ್ಬಂದಿ ವರ್ಗ,ಹರಿಪ್ರಿಯಾ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರು, ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸುತ್ತಮುತ್ತಲಿನ ಪರಿಸರದಲ್ಲಿ ಕಸವನ್ನು ಸಂಗ್ರಹಿಸಲಾಯಿತು.

ನಂತರ ನಡೆದ ಗ್ರಾಮ ಪಂಚಾಯತ ಸಭಾಭವನದಲ್ಲಿ ಆದಿಕರ್ಮಯೋಗಿ ಕಾರ್ಯಕ್ರಮ ಹಾಗೂ ದೂರದೃಷ್ಟಿ ಗ್ರಾಮ ಕ್ರಿಯಾ ಯೋಜನೆಯ ವಿಶೇಷ ಗ್ರಾಮ ಸಭೆಯಲ್ಲಿ ಪಂಚಾಯತ ಕಾರ್ಯದರ್ಶಿ ಗಜಾನನ ಸಾವರ್ಕರ್ ಗ್ರಾಮ ಸಭೆಯ ಕುರಿತು ಮಾಹಿತಿ ನೀಡಿ,ಕ್ರಿಯಾ ಯೋಜನೆಯನ್ನು ಓದಿ ಅನಮೋದನೆ ಪಡೆಯಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಮಸ್ಥರಿಗೆ ಕಸದ ಬುಟ್ಟಿಯನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಂದಿಗದ್ದೆ ಗ್ರಾಮ ಪಂಚಾಯತ ಅಧ್ಯಕ್ಷ ಅರುಣ ದೇಸಾಯಿ,ಉಪಾಧ್ಯಕ್ಷೆ ದಾಕ್ಷಾಯಣಿ ದಾನಶೂರ, ಸದಸ್ಯರಾದ ಧವಳೋ ಗಣೇಶ ಸಾವರ್ಕರ್,ಶೋಭಾ ಆರ್,ಪಂಚಾಯತ ಕಾರ್ಯದರ್ಶಿ ಗಜಾನನ ಸಾವರ್ಕರ್ ,ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಕನ್ಯಾ ದೇಸಾಯಿ, ಭಾರತಿ ಹೆಗಡೆ,ಉಷಾ ದೇಸಾಯಿ,ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು,ಪಂಚಾಯತ ಸಿಬ್ಬಂದಿ ವರ್ಗ,ಅರಣ್ಯಇಲಾಖೆ ಸಿಬ್ಬಂದಿ,ಸಾರ್ವಜನಿಕರು ಉಪಸ್ಥಿತರಿದ್ದರು.