Banner Ad

ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ: ಗುಳ್ಳಾಪುರದಿಂದ ಹೆಗ್ಗಾರ್, ಶೇವ್ ಕಾರ್ ಭಾಗಕ್ಕೆ ಸಂಪರ್ಕ ಕಲ್ಪಿಸಿಕೊಳ್ಳಲು ಈ ಭಾಗದ ಗ್ರಾಮಸ್ಥರೇ ಸ್ವಂತ ಖರ್ಚಿನಲ್ಲಿ ತಾತ್ಕಾಲಿಕ ಮಣ್ಣಿನ ರಸ್ತೆ ನಿರ್ಮಿಸಿಕೊಂಡಿದ್ದಾರೆ.

Banner Ad

ಕಳೆದ ಕೆಲವು ವರ್ಷಗಳ ಹಿಂದೆ ಭಾರಿ ಮಳೆಯಿಂದಾಗಿ ಗಂಗಾವಳಿ ನದಿ ಉಕ್ಕಿ ಹರಿದಿದ್ದರಿಂದ ಈ ಮುಖ್ಯ ಸೇತುವೆ ಕೊಚ್ಚಿಹೋಗಿತ್ತು. ಇದಾದ ನಂತರ ಈ ಸೇತುವೆ ನಿರ್ಮಾಣಕ್ಕೆ ಸರ್ಕಾರ ಇನ್ನೂ ಕೂಡ ಮೀನಾ ಮೇಷ ಎಣಿಸುತ್ತಿದೆ. ಸೇತುವೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದರೂ ಕೂಡ ಇದುವರೆಗೂ ಸೇತುವೆ ನಿರ್ಮಾಣವಾಗಿಲ್ಲ.

ಇದರಿಂದಾಗಿ ಬೇಸಿಗೆ ಸಂದರ್ಭದಲ್ಲಿ ನದಿಗೆ ನೀರು ಕಡಿಮೆ ಇರುವುದರಿಂದ ನದಿಗೆ ೊಡ್ಡ ದೊಡ್ಡ ಪೈಪ್‌ಗಳನ್ನು ಜೋಡಿಸಿ ಅದರ ಮೇಲೆ ಮಣ್ಣು ಹಾಕಿ ಈ ಭಾಗದ ಗ್ರಾಮಸ್ಥರು ಸ್ವಂತ ಖರ್ಚಿನಲ್ಲಿ ತಾತ್ಕಾಲಿಕ ಮಣ್ಣಿನ ರಸ್ತೆ ನಿರ್ಮಿಸಿಕೊಳ್ಳುತ್ತಿದ್ದಾರೆ. ಸೇತುವೆ ಕೊಚ್ಚಿ ಹೋದ ವರ್ಷದಿಂದ ಹಿಡಿದು ಪ್ರತಿ ವರ್ಷ ಈ ಭಾಗದ ಗ್ರಾಮಸ್ಥರು ತಮಗೆ ಪಟ್ಟಣಕ್ಕೆ ಸಂಪರ್ಕ ಕಲ್ಪಿಸಿಕೊಳ್ಳಲು ಸ್ವಂತ ಖರ್ಚಿನಲ್ಲಿ ಮಣ್ಣಿನ ರಸ್ತೆ ನಿರ್ಮಿಸಿಕೊಳ್ಳುತ್ತಾ ಬಂದಿದ್ದಾರೆ. ಪ್ರಸಕ್ತ ವರ್ಷವೂ ಇದೀಗ ಮಣ್ಣಿನ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಈ ಭಾಗದ ಗ್ರಾಮಸ್ಥರು ಒಟ್ಟಾಗಿ ತಮ್ಮ ಖರ್ಚಿನಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಿ ಕೊಂಡಿರುವುದು ಸರ್ಕಾರದ ಬೇ ಜವಾಬ್ದಾರಿ ತನಕ್ಕೆ ಹಿಡಿದ ಕನ್ನಡಿ ಯಾಗಿದೆ.

Banner Ad