ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ತಾಲೂಕಿನ ಕಾಳಮ್ಮನಗರದಲ್ಲಿ ವಾಸಿಸುತ್ತಿದ್ದ ಬಿಕಾಂ ವಿದ್ಯಾರ್ಥಿನಿ ದಿಡೀರ್ ಅಸ್ವಸ್ಥಗೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಅನುಷಾ (19) ಇವಳಿಗೆ ದಿಡೀರ್ ಆರೋಗ್ಯದಲ್ಲಿ ಏರುಪೇರಾಗಿ ರಕ್ತದ ಒತ್ತಡದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದರಿಂದ ಅವರು ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಪ್ರಾಚಾರ್ಯರು ಮತ್ತು ಉಪನ್ಯಾಸಕರು, ಸ್ನೇಹಿತರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
