ಸುದ್ದಿ ಕನ್ನಡ ವಾರ್ತೆ
ಸಿದ್ದಾಪುರ:ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಂಗವಾಗಿ ತಾಲೂಕಿನ ಕುಚಗುಂಡಿಯ ಕಲ್ಯಾಣೇಶ್ವರ ದೇವಸ್ಥಾನದ ಸಭಾಂಗಣದಲ್ಲಿ
ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮಯು
ಅ.27 ರಂದು ಬೆಳಿಗ್ಗೆ 9ಗಂಟೆಗೆ ಆಯೋಜಿಸಲಾಗಿದೆ.
ಶಿರಳಗಿ ರಾಜಾರಾಮ ಕ್ಷೇತ್ರದ ಬ್ರಹ್ಮಾನಂದ ಭಾರತೀ ಶ್ರೀಗಳು ದಿವ್ಯ ಸಾನಿಧ್ಯ ವಹಿಸಲಿದ್ದು , ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಲಿದ್ದಾರೆ.
ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಲ್ಯಾಣೇಶ್ವರ ದೇವಸ್ಥಾನದ ಅಧ್ಯಕ್ಷ ಸುಬ್ರಾಯ ಹೆಗಡೆ, ಹಸ್ರಗೋಡ ಗ್ರಾಪಂ ಮಾಜಿ ಅಧ್ಯಕ್ಷ ಪ್ರದೀಪ ಹೆಗಡೆ ಕರ್ಜಗಿ, ಮಾಜಿ ಸದಸ್ಯ ಕೆರಿಯಾ ಗೌಡ, ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಮುಖ ಅಣ್ಣಪ್ಪ ಗೌಡ ಉಪಸ್ಥಿತರಿರಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
