ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಬಳಿಯ ತದಡಿ ಬಂದರಿನಲ್ಲಿ ಮಂಗಳವಾರ ಸಂಜೆ ಮೀನುಗಾರಿಕಾ ದೋಣಿಯಿಂದ ಮೀನಿನ ತ್ಯಾಜ್ಯ ತೆಗೆಯುವಾಗ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.
ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ದಲ್ಲಿ ಕಾರ್ಮಿಕರೊಬ್ಬ ಚಿಕಿತ್ಸೆ ಪಡೆಯುತ್ತಿದ್ದು ಈ ಅಪಘಾತದಲ್ಲಿ ನೌಶಾದ್ ಅಲಿಷ ರಾಜ್, ಅಮನ್ ಆಯುಬ್ ಲಾಂಗ್ಡು , ಅಮೀರ್ ಅಬ್ದುಲ್ ಎಂಬ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಬ್ದುಲ್ ಯಾಕುಬ್ ದಾದಿಯ ಎಂಬ ಕಾರ್ಮಿಕ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಲಭ್ಯವಾಗಿರುವ ಮಾಹಿತಿಯ ಅನುಸಾರ ತದಡಿ ಬಂದರಿನಲ್ಲಿ ಮೀನುಗಾರಿಕಾ ದೋಣಿಯಿಂದ ಮಂಗಳವಾರ ಸಂಜೆ ಮೀನಿನ ತ್ಯಾಜ್ಯ ತೆಗೆಯುವ ಕಾರ್ಯ ನಡೆಯುತ್ತಿತ್ತು. ಅದೇ ಸಮಯದಲ್ಲಿ ಕಾರ್ಮಿಕರು ಉಸಿರುಗಟ್ಟಿ ಈ ಘಟನೆ ಸಂಭವಿಸಿದೆ.
ಘಟನೆಯ ಬಗ್ಗೆ ಮಾಹಿತಿ ಲಭ್ಯವಾದ ಕೂಡಲೇ ಪೊಲೀಸ್ ಇನ್ಸ್ಪೆಕ್ಟರ್ ಶ್ರೀಧರ್ ಎಸ್ ಆರ್ ಮತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನಿಲ್ ರವರು ಘಟನಾಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದರು. ಬಂದರಿನಲ್ಲಿ ಕೆಲಸ ಮಾಡುವಾಗ ಸಂಭವಿಸಿದ ಈ ಅಪಘಾತವು ಮೀನುಗಾರಿಕಾ ವಲಯದ ಕಾರ್ಮಿಕರ ಸುರಕ್ಷತೆಯ ಸಮಸ್ಯೆ ಪ್ರಶ್ನೆ ಎತ್ತಿದೆ …?
