ಸುದ್ದಿ ಕನ್ನಡ ವಾರ್ತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರ ನೇರ ಪರಿಣಾಮ ಕರ್ನಾಟಕದ ಮೇಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುನ್ನೆಚ್ಚರಿ ಕಾರ್ಯಕ್ರಮವಾಗಿ ರಾಜ್ಯ ಹವಾಮಾನ ಇಲಾಖೆಯು ಕರ್ನಾಟಕ ರಾಜ್ಯಾದ್ಯಂತದ 23 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ . ಕರಾವಳಿ ವಿರಪ್ರದೇಶ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆ ಇದೆ.
