Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಜಿಲ್ಲಾ ಪಂಚಾಯತ ಉತ್ತರಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹನುಮಾನ ಲೇನ ರಾಮನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೋಯಿಡಾ ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ 2025 – 26 ರ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಅಸು ಶಾಲೆಯ ವಿದ್ಯಾರ್ಥಿಗಳು ಬಾಲಕಿಯರ ವಿಭಾಗದಲ್ಲಿ ಖೋ,ಖೋ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಹಾಗೂ ರೀಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Banner Ad

ಇವರ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಸಂಗೀತಾ ಲಾಂಜೇಕರ,ಸಹ ಶಿಕ್ಷಕರಾದ ಸುಮನಾ ಭಂಡಾರಿ, ಅತಿಥಿ ಶಿಕ್ಷಕಿ ಸಾಧನಾ ದೇಸಾಯಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಾರುತಿ ಸುತಾರ ಉಪಾಧ್ಯಕ್ಷರು,ಸದಸ್ಯರು, ಊರಿನ ಮುಖಂಡರಾದ ವಿಜಯ ಪಂಡಿತ,ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಪಾಟೀಲ್ ,ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕಿ ವಿಜಯಲಕ್ಷ್ಮೀ ಹಂಜಿ,ರಾಮನಗರ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಬಿ. ಹೆಚ್. ಬಾಗವಾನ್, ಪಾಲಕರು, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Banner Ad