ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಶಿರಸಿ ಹಾಗೂ ಹೆದ್ದಾರಿ ತಡೆ ಸಂಚಾಲನಾ ಸಮಿತಿ ಯಲ್ಲಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ ಮೂರರಂದು ಮಂಗಳವಾರ ನಡೆದ ನದಿ ತಿರುವು ಯೋಜನೆ ವಿರೋಧಿ ರಾಷ್ಟ್ರೀಯ ಹೆದ್ದಾರಿ ತಡೆ ಆಂದೋಲನದಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಇಲ್ಲಿಯವರೆಗೆ ಸೀಬರ್ಡ್, ಕೈಗಾ, ಶರಾವತಿ, ಟೇಲ್ ರೇಸ್ ಸೇರಿದಂತೆ ಹಲವು ಯೋಜನೆಗಳಿಗೆ ಸಾವಿರಾರು ಎಕರೆ ಭೂಮಿ ಮತ್ತು ಮನೆಮಠಗಳನ್ನು ತ್ಯಾಗ ಮಾಡಿರುವ ಜಿಲ್ಲೆಯ ಜನರು ಇನ್ನುಮುಂದೆ ಯಾವುದೇ ಬೃಹತ್ ಯೋಜನೆಗಳಿಗೆ ಜಾಗ ಬಿಟ್ಟುಕೊಡಲು ಸಿದ್ದರಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.
ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ನಿರ್ಣಯಗಳು:
ಜಿಲ್ಲೆಯನ್ನು ಪ್ರತಿನಿಧಿಸುವ ಎಲ್ಲಾ ಸಂಸದರು ಶಾಸಕರು ಹಾಗೂ ಪರಿಷತ್ ಸದಸ್ಯರು ಪಕ್ಷವೇದ ಮರೆತು ಒಗ್ಗೂಡಿ ಮುಂದಿನ 15 ದಿನಗಳಲ್ಲಿ ಈ ಯೋಜನೆಗೆ ತಡೆ ಹಾಕುವ ಬಗ್ಗೆ ಗಟ್ಟಿಯಾದ ತೀರ್ಮಾನ ಕೈಗೊಳ್ಳಬೇಕು.
ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು ಹಾಗೂ ಜನಪ್ರತಿನಿಧಿಗಳ ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸಲಾಗುವುದು.
ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ಸಂರಕ್ಷಣೆಗಾಗಿ ಮುಂಬರುವ ಎಲ್ಲಾ ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸುವಂತಹ ಕಠಿಣ ನಿರ್ಧಾರಕ್ಕೂ ಹಿಂಜರಿಯುವುದಿಲ್ಲ.
ಜಿಲ್ಲೆಯ ಹಿತ ಕಾಪಡಲು ಎಲ್ಲಾ ಜನಪ್ರತಿನಿಧಿಗಳು ಒಮ್ಮತದ ತೀರ್ಮಾನಕ್ಕೆ ಬರಬೇಕು ಎಂದು ಸಮಿತಿ ಆಗ್ರಹಿಸಿದೆ.
ಹೀಗೆ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.
