ಸುದ್ದಿ ಕನ್ನಡ ವಾರ್ತೆ
ಶಿರಸಿ:ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕುಳುವೆ ಮಂಡಲವು ಇತ್ತೀಚಿಗೆ ಶಿರಸಿ ತಾಲೂಕಿನ ಕುಳುವೆಯಲ್ಲಿ ಆಯೋಜಿಸಿದ್ದ ವಿಜಯದಶಮಿ ಉತ್ಸವದಲ್ಲಿ, ಮಾನ್ಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪಾಲ್ಗೊಂಡರು.
ಸಂಘದ ಕಾರ್ಯಕ್ರಮದ ಸಂಪ್ರದಾಯದಂತೆ ಸಂಸದರು ಗಣವೇಷ (ಸಂಘದ ಸಮವಸ್ತ್ರ) ಧರಿಸಿ ಉತ್ಸವದಲ್ಲಿ ಭಾಗವಹಿಸಿದ್ದು, ವಿಶೇಷವಾಗಿತ್ತು.
ಈ ಮೂಲಕ ಅವರು ಸಂಘದ ನಿಷ್ಠಾವಂತ ಸ್ವಯಂಸೇವಕರಾಗಿ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಸ್ವಯಂಸೇವಕರು, ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.