ಸುದ್ದಿ ಕನ್ನಡ ವಾರ್ತೆ
ಕಾರವಾರ: ಕಾರವಾರದ ಮಾಜಳಿಯಲ್ಲಿ ಹೇರ್ ಕಟಿಂಗ್ ಸಲೂನ್ ಗೆ ತೆರಳಿದ್ದ ಹತ್ತು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಮನವಿ ಮಾಡಿದ್ದಾರೆ.
ಕಾರವಾರದ ಮಾಜಾಳಿ ಯಲ್ಲಿರುವ ಹೇರ್ ಕಟಿಂಗ್ ಸಲೂನ್ ಗೆ ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಹೋಗಿದ್ದ ಹತ್ತು ವರ್ಷದ ಬಾಲಿಕೆಯ ಮೇಲೆ ಉತ್ತರ ಪ್ರದೇಶ ಮೂಲದ ಸಂಶಾದ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಗ್ರಾಮಸ್ಥರು ಪೊಲೀಸ್ ಠಾಣೆಗೆ ತೆರಳಿ ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ತೀವ್ರ ತನಿಗೆ ಕೈಗೆತ್ತಿಕೊಂಡಿದ್ದಾರೆ.
