ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ಪ್ರಧಾನಿ ಮತ್ತು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ವಿರ್ನೋಲಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಧಾನಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ರ ಕಾರ್ಯಕ್ರಮ ದಿನಾಂಕ:17-11-2026 ರ ಮಂಗಳವಾರ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ವಿರ್ನೋಲಿ ಶಾಲೆಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.
ಕಾರ್ಯಕ್ರಮದ ಆರಂಭದಲ್ಲಿ ಸಭಾ ಕಾರ್ಯಕ್ರಮದ ವೇದಿಕೆಗೆ ಗಣ್ಯರನ್ನು ವಿರ್ನೋಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಕೀಲ್ ಅಹ್ಮದ್ ಆತ್ಮೀಯವಾಗಿ ಸ್ವಾಗತಿಸಿ,ಸ್ವಾಗತ ಭಾಷಣ ಮಾಡಿದರು.ನಂತರ ವಿದ್ಯಾರ್ಥಿಗಳಿಂದ ಸ್ವಾಗತ ಗೀತೆ ಹಾಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ರಾವಜೀ ದೇಸಾಯಿ ಸಾಮಾಜಿಕ ಕಾರ್ಯಕರ್ತರು,ಮುಖ್ಯ ಅತಿಥಿಗಳಾಗಿ ಕೃಷ್ಣ ದೇಸಾಯಿ,ಕೆಡಿಸಿಸಿ ಬ್ಯಾಂಕ್,ನಿರ್ದೇಶಕರು, ಉಪಾಧ್ಯಕ್ಷರು ಶಿರಸಿ,ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಯಶವಂತ ನಾಯ್ಕ,ಪ್ರಧಾನಿ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವಿಶಾಲಾಕ್ಷಿ .ಎಮ್. ನಾಯ್ಕ,ಕಾರ್ಟೋಳಿ ಶಾಲೆಯ ಮುಖ್ಯ ಶಿಕ್ಷಕರಾದ ವಿನಾಯಕ ಪಟಗಾರ,ಅವೇಡಾ ಶಾಲೆಯ ಮುಖ್ಯ ಶಿಕ್ಷಕರಾದ ರೋಹಿದಾಸ ಮಡಿವಾಳ,ಬಾಮಣಗಿ ಶಾಲೆಯ ಮುಖ್ಯ ಶಿಕ್ಷಕರಾದ ಕಿರಣಕುಮಾರ ನಾಯ್ಕ, ಮೌಳಂಗಿ ಶಾಲೆಯ ಸಹ ಶಿಕ್ಷಕರಾದ ಶ್ರೀಕಾಂತ ನಾಯ್ಕ ಕಾರ್ಯಕ್ರಮದ ಕುರಿತು ಹಿತನುಡಿಗಳನ್ನು ನುಡಿದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರಾದ ಲಕ್ಷ್ಮಣ ಸಾವಂತ,ನಾಗರಾಜ ಧರಣಿ,ಕೇಶವ ಧರಣಿ,ಸಂಜನಾ ಶಂಕರ ಗಾವಡೆ,ಬಾಮಣಗಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಭಾಸ ಗಾಂವಕರ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜೋಯಿಡಾ ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಯಶವಂತ ನಾಯ್ಕ ಹಾಗೂ ಶಿಕ್ಷಕರ ಸಂಘದ ಖಜಾಂಚಿಗಳಾದ ಕಿರಣಕುಮಾರ ನಾಯ್ಕ ಅವರನ್ನು ಪ್ರಧಾನಿ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವಿಶಾಲಾಕ್ಷಿ ನಾಯ್ಕ ಮೇಡಂ ಹಾಗೂ ಕ್ಲಸ್ಟರಿನ ಶಿಕ್ಷಕರ ವೃಂದದವರು ಸನ್ಮಾನಿಸಿದರು. ಮೌವಳಂಗಿ ಶಾಲೆಯ ಸಹ ಶಿಕ್ಷಕರಾದ ಶ್ರೀಕಾಂತ ನಾಯ್ಕ ವೇದಿಕೆಯ ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ನಂತರ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಪ್ರಧಾನಿ ಕ್ಲಸ್ಟರಿನ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಶಿಕ್ಷಕ ವೃಂದ ಹಾಗೂ ಪಾಲಕರೊಂದಿಗೆ ಭಾಗವಹಿಸಿದರು. ಪ್ರಧಾನಿ ಕ್ಲಸ್ಟರಿನ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಎಲ್ಲಾ ಕಾರ್ಯಕ್ರಮಗಳಿಗೆ ಕ್ಲಸ್ಟರಿನ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು, ಪಾಲಕ-ಪೋಷಕರು,ಹಳೆಯ ವಿದ್ಯಾರ್ಥಿಗಳು,ಊರಿನ ಗ್ರಾಮಸ್ಥರು ತನು-ಮನ-ಧನದ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
