ಸುದ್ದಿ ಕನ್ನಡ ವಾರ್ತೆ
ಅಂಕೋಲಾ: ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಕೇಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಸೋಮವಾರ ಬೆಳಿಗ್ಗೆ ಅಗಸೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಈ ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬಸ್ ಮುಂಬಾಗ ಸಂಪೂರ್ಣವಾಗಿ ಮುಜುಗುಜ್ಜಾಗಿದೆ. ಈ ಭೀಕರ ಅಪಘಾತದಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಐದು ಜನ ಪ್ರವಾಸಿಗರು ಗಾಯಗೊಂಡಿದ್ದಾರೆ ಎಂಬ ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಅಂಕೋಲಾ ಪೊಲೀಸರು ಆಗಮಿಸಿದ್ದು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
ಅಂಕೋಲಾದ ಬಾಳೆಗುಳಿಯಿಂದ ಯಲ್ಲಾಪುರಕ್ಕೆ ಸಾಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹೊಂಡಮಯವಾಗಿದೆ. ಈ ಮಾರ್ಗದಲ್ಲಿ ಇದರಿಂದಾಗಿಯೇ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದೆ. ಕಳೆದ ಕೆಲ ದಿನಗಳಿಂದಷ್ಟೇ ಈ ಭಾಗದಲ್ಲಿ ಜನತೆ ಬೇಸತ್ತು ರಸ್ತೆ ಮಧ್ಯದಲ್ಲಿ ಪಿಂಡಪ್ರದಾನ ಮಾಡಿದ್ದರು.
