ಸುದ್ದಿ ಕನ್ನಡ

ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ರಾಮನಗರ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ ಚಾಪಾಳಿ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ದಿನಾಂಕ:26-11-2026 ರ ಗುರುವಾರರಂದು ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕ ಗುರುನಾಥ ಮಾಜಾಳಕರ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡ, ಸಹ ಶಿಕ್ಷಕರಾದ ಆನಂದ ಪಿ.ವಿದ್ಯಾ ಮೇಡಂ,ಸಮೂಹ ಸಂಪನ್ಮೂಲ ವ್ಯಕ್ತಿಗಳು,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು/ಪಾಲಕರಾದ ಗುರುನಾಥ ಮಾಜಾಳಕರ,ಸರ್ವ ಪದಾಧಿಕಾರಿಗಳು, ಕ್ಲಸ್ಟರಿನ ಮುಖ್ಯ ಶಿಕ್ಷಕ,ಸಹ ಶಿಕ್ಷಕ ವೃಂದದವರು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.