ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ತಾಲೂಕಿನ ಗುಳ್ಳಾಪುರ ಗ್ರಾಮದ ಶ್ರೀ ಶಿವ ವ್ಯಾಘ್ರೇಶ್ವರ ದೇವರ ಜಾತ್ರೆಯ ಅಂಗವಾಗಿ ಫೆಬ್ರುವರಿ 16 ರಂದು ರವಿವಾರ ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಅಂದು ಸಂಜೆ 7:30 ರಿಂದ ಕರಾವಳಿಗಳ ಲೀಲಾವು ಹಾಗೂ ರಾತ್ರಿ 9 ಗಂಟೆಗೆ ಮಹಾಮಂಗಳಾರತಿ, ಪ್ರಾರ್ಥನೆ, ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಲಿದೆ.

ಅಂದು ರಾತ್ರಿ 10:00ಗೆ ಪೂರ್ಣಚಂದ್ರ ಯಕ್ಷಗಾನ ಮೇಳ ಕೊಂಡದಕುಳಿ ಕುಂಭಾಶಿ ಇವರಿಂದ ದಮಯಂತಿ ಪುನಃ ಸ್ವಯಂವರ ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಶಿವ ವ್ಯಾಘ್ರೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಗುಳ್ಳಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.