ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ :ತಾಲೂಕಿನಲ್ಲಿ ಮಾನ್ಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿರವರು ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮದಲ್ಲಿ ವಿವಿಧ ರಾಜಕೀಯ ಪಕ್ಷಗಳಿಂದ ಆಗಮಿಸಿದ ಕಾರ್ಯಕರ್ತರನ್ನು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಆತ್ಮೀಯವಾಗಿ ಸ್ವಾಗತಿಸಿದರು, ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು.

​ಪಕ್ಷಕ್ಕೆ ಸೇರ್ಪಡೆಗೊಂಡ ಎಲ್ಲಾ ಹೊಸ ಸದಸ್ಯರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತಾ, ಈ ಸೇರ್ಪಡೆಯು ಪಕ್ಷದ ಸಂಘಟನಾತ್ಮಕ ಬಲವನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ತಳಮಟ್ಟದಲ್ಲಿ ಪಕ್ಷದ ವಿಸ್ತರಣೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯಲ್ಲಾಪುರ ಮಂಡಲ ಅಧ್ಯಕ್ಷ ಪ್ರಸಾದ ಹೆಗಡೆ,ಖ್ಯಾತ ನ್ಯಾಯವಾದಿ ನಾಗರಾಜ ನಾಯಕ,ಉಮೇಶ ಹೆಗಡೆ,ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ನಂತರ ಯಲ್ಲಾಪುರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.