ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ಕಳಚೆ ರಸ್ತೆಯಲ್ಲಿ ಮಂಗಳವಾರ ರಾತ್ರಿಯ ವೇಳೆ ಮರ ಉರುಳಿ ಬಿದ್ದ ಪರಿಣಾಮ ವಾಹನ ಗಳ ಸಂಚಾರಕ್ಕೆ ತೊಂದರೆಯಾಯಿತು.
ಕಳಚೆ ರಸ್ತೆಯ ತಳಕೆಬೈಲ ಹತ್ತಿರ ಮರ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಹಾಗೂ ವಿದ್ಯುತ್ ತಂತಿ,ಕಂಬಕ್ಕೂ ಹಾನಿಯಾಗಿ ಕಳಚೆ ಸುತ್ತಮುತ್ತಲಿನ ಗ್ರಾಮದ ಜನರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಮಾರನೇಯ ದಿನ ಗ್ರಾಮಸ್ಥರು ಮರವನ್ನು ತೆರವುಗೊಳಿಸುವುದರ ಮೂಲಕ ರಸ್ತೆ ಸಂಚಾರಕ್ಕೆ ಮುಕ್ತ ವಾಯಿತು.ಹೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಹೊಸ ವಿದ್ಯುತ್ ಕಂಬ ಹಾಕಿ,ವಿದ್ಯುತ್ ಸಂಪರ್ಕ ಸುತ್ತಮುತ್ತಲಿನ ಗ್ರಾಮಗಳಿಗೆ ಒದಗಿಸಿದರು.