ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ 2026-27 ನೇಯ ಸಾಲಿನ ಕಾಮಗಾರಿ ಕ್ರಿಯಾ ಯೋಜನೆ ತಯಾರಿಸಲು,ಬೇಡಿಕೆಗಳ ಪಟ್ಟಿ ಸಲ್ಲಿಸಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾಮ ಸಭೆಯ ಆರಂಭದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯರವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.
ಗ್ರಾಮ ಆಡಳಿತ ಅಧಿಕಾರಿ ಶಿವಾನಂದರವರು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯ ಮಾಹಿತಿ ನೀಡಿದರು. ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅರುಣ ದೇಸಾಯಿ ವಹಿಸಿದ್ದರು. ಉಪಾಧ್ಯಕ್ಷೆ ದಾಕ್ಷಾಯಣಿ ದಾನಶೂರ,ಸದಸ್ಯರಾದ ಧವಳೋ ಸಾವರ್ಕರ್, ಸುಮನಾ ಹರಿಜನ, ಶೋಭಾ ಎಲ್ಲೇಕರ, ಅವುರ್ಲಿ ಅರಣ್ಯ ಇಲಾಖೆಯ ವನಪಾಲಕ ರೇವಣ ಸಿದ್ಧ,ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.ಗ್ರಾಮ ಪಂಚಾಯತ ಕಾರ್ಯದರ್ಶಿ ಗಜಾನನ ಸಾವರ್ಕರ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.