ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ಆರತಿಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾದ ಕಡೆಗೆ ಹೊರಟಿದ್ದ ಕಾರು ಆರತಿಬೈಲ್ ಘಟ್ಟದ ಆರಂಭದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಗಟಾರನಲ್ಲಿ ಪಲ್ಟಿಯಾಗಿದೆ.ಕಾರು ಜಖಂ ಗೊಂಡಿದ್ದು,ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
