Banner Ad

ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ:ತಾಲೂಕಿನ ಆರತಿಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ ಲಾರಿ ಶನಿವಾರ ರಸ್ತೆಯ ಪಕ್ಕದ ಕಂದಕಕ್ಕೆ ಪಲ್ಟಿಯಾದ ಘಟನೆ ನಡೆದಿದೆ.

Banner Ad

ಹುಬ್ಬಳ್ಳಿ ಕಡೆಯಿಂದ ಅಂಕೋಲಾದ ಕಡೆಗೆ ಹೊರಟಿದ್ದ ಸಿಮೆಂಟ್ ತುಂಬಿದ ಲಾರಿ ಆರತಿಬೈಲ್ ಘಟ್ಟದ ಆರಂಭದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಪಲ್ಟಿಯಾಗಿದೆ.ವಾಹನದಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾನೆ.ಕಾಲಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.

Banner Ad