ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ರಾಷ್ಟೀಯ ಹೆದ್ದಾರಿಯ ಆರತಿಬೈಲ್ ಘಟ್ಟದ ತಿರುವಿನಲ್ಲಿ ಕಲ್ಲಿದ್ದಲು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ರವಿವಾರ ಸಂಜೆ ನಡೆದಿದೆ.
ಲಾರಿ ಪಲ್ಟಿಯಾದ ರಭಸಕ್ಕೆ ಲಾರಿ ಯಲ್ಲಿನ ಕಲ್ಲಿದ್ದಲು ಹೆದ್ದಾರಿಯ ಮೇಲೆ ರಾಶಿಬಿದ್ದ ಕಾರಣ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಭೇಟಿ ನೀಡಿದ ಪೋಲಿಸರು ಪರಿಶೀಲಿಸಿ ಜೆಸಿಬಿ ಮೂಲಕ ಹೆದ್ದಾರಿಯ ಮೇಲೆ ಬಿದ್ದಿರುವ ಕಲ್ಲಿದ್ದಲನ್ನು ಬದಿಗೆ ಸರಿಸುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಶ್ರಮಿಸಿದರು.
