ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ಹಳಿಯಾಳ ಕ್ರಾಸ್ ಹತ್ತಿರ ಖಾಸಗಿ ಬಸ್ಸೊಂದು ಸ್ಟೇರಿಂಗ್ ಲಾಕ್ ಆಗಿ ರಸ್ತೆಯ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಮುಂಬೈಯಿಂದ ಗೋವಾಕ್ಕೆ ಹೋಗುತ್ತಿದ್ದ ಎಸ್. ಆರ್. ಎಸ್ ಬಸ್ ಇದಾಗಿದ್ದು ಸ್ಟೇರಿಂಗ್ ಲಾಕ್ ಆದ ಕಾರಣ ರಸ್ತೆಯ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಚಾಲಕನ ಕಾಲು ಮುರಿದಿದೆ.ಬಸ್ಸಿನಲ್ಲೇ ಸಿಲುಕಿ ಕೊಂಡಿದ್ದ ಚಾಲಕನನ್ನು ಸ್ಥಳೀಯ ಪೋಲಿಸರು ರಕ್ಷಿಸಿದ್ದಾರೆ.ಬಸ್ ನಲ್ಲಿದ್ದ ಚಾಲಕ ಹಾಗೂ ನಾಲ್ವರು ಪ್ರಯಾಣಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಗಾಯಗಳಾಗಿವೆ.
ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ,ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬಸ್ ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
