ಸುದ್ದಿ ಕನ್ನಡ ವಾರ್ತೆ
ಕಾರವಾರ:ಅಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿ,ಅದು ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.
ಇದರ ಪರಿಣಾಮವಾಗಿ ಉತ್ತರಕನ್ನಡ ಜಿಲ್ಲೆಗೆ ಅಕ್ಟೋಬರ 23 ರಿಂದ 25 ರ ಬೆಳಗ್ಗೆ 8:30 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ,ಬೆಂಗಳೂರು ಇವರ ಮುನ್ಸೂಚನೆಯಂತೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು,ಭಾರೀ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಹಾಗೂ ಮೀನುಗಾರರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದಾರೆ.
