Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ ವ್ಯಾಪ್ತಿಯ ಕರಂಜೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಎರಡು ದಿನಗಳ ಸತತ 18 ನೇ ವರ್ಷದ ಗ್ರಾಮೀಣ ತಂಡಗಳ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿ ಸಂಪನ್ನಗೊಂಡಿತು.

Banner Ad

ಊರಿನ ಹಾಗೂ ಪರ ಊರಿನ ಗಣ್ಯರು ಕ್ರಿಕೆಟ್ ಪಂದ್ಯಾವಳಿಯನ್ನು ಉಧ್ಘಾಟಿಸಿದರು. ತಾಲೂಕಿನ ತಂಡಗಳು ಕ್ರೀಡಾ ಮನೋಭಾವನೆಯಿಂದ ಆಟವಾಡಿ,ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಿದರು. ಅಂತಿಮ ದಿನದ ಪಂದ್ಯಾವಳಿಯ ಪೈನಲ್ ಪಂದ್ಯದಲ್ಲಿ ದೇಸಾಯಿವಾಡಾ ತಂಡದ ಆಟಗಾರರು ಉತ್ತಮ ಆಟದ ಪ್ರದರ್ಶನ ನೀಡಿ ಡಿಗ್ಗಿ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಂದ್ಯ ಪುರುಷ ರಾಹುಲ್,ಸರಣಿ ಶ್ರೇಷ್ಠ ಶುಭಂ,ಉತ್ತಮ ಬೌಲರ್ ದಿಪೇಶ ವೇಳಿಪ ವೈಯುಕ್ತಿಕ ಬಹುಮಾನಗಳನ್ನು ಪಡೆದುಕೊಂಡರು.ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಕ್ಕೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಕ್ರೀಡಾಕೂಟದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಸಂಘಟಕರು ಅಚ್ಚುಕಟ್ಟಾಗಿ ಮಾಡಿದ್ದರು.ಕ್ರೀಡಾಕೂಟವನ್ನು ದಾನಿಗಳ,ಊರ ನಾಗರೀಕರ ಸಹಕಾರದಲ್ಲಿ ಉತ್ತಮವಾಗಿ ಸಂಘಟಿಸಿದ್ದರು.

Banner Ad