Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ 27 ಸೋಮವಾರ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದ ರಾಜ್ಯ ಮಟ್ಟದ ಪ.ಪೂ ಕಾಲೇಜುಗಳ ಕುಸ್ತಿ ಕ್ರೀಡಾ ಕೂಟದಲ್ಲಿ ಬಿ.ಜಿ.ವಿ.ಎಸ್ ಪ.ಪೂ ಕಾಲೇಜು ರಾಮನಗರದ (ಉ.ಕ) ಕ್ರೀಡಾ ವಸತಿ ನಿಲಯದ ಪಟುಗಳು ಸಾಧನೆ ಮಾಡಿರುತ್ತಾರೆ..

Banner Ad

ಮನಿಷಾ ಜಿ.ಸಿದ್ದಿ -72 ಕೆ.ಜಿ ವಿಭಾಗದಲ್ಲಿ ಬಂಗಾರದ ಪದಕ ಪಡೆದು ಹರಿಯಾಣದ ಪಾಣಿಪತ್ ನಲ್ಲಿ ನವೆಂಬರ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ, ಗ್ರೀಕೋ ರೋಮನ್ ನಲ್ಲಿ ಅಬುಬಕ್ಕರ್ ಸಲೀಮ್ ನದಾಪ್-60 ಕೆ.ಜಿ ವಿಭಾಗದಲ್ಲಿ ಬೆಳ್ಳಿಯ ಪದಕ . ಅಮೃತ್ ದುರ್ಗಣ್ಣವರ್-65 ಕೆ.ಜಿ ವಿಭಾಗದಲ್ಲಿ ಬೆಳ್ಳಿಯ ಪದಕ ಮತ್ತು ಸವಿತಾ ಅಂತೋನ ಸಿದ್ದಿ -57 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆಯುವ ಮೂಲಕ ಸಾಧನೆ ಮಾಡಿರುತ್ತಾರೆ..

ಇವರ ಸಾಧನೆಗೆ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಅಧ್ಯಕ್ಷರು ಶ್ರೀಮತಿ ವನಿತಾ ಪ್ರಭಾಕರ ರಾಣೆ, ಉಲ್ಲಾಸ ನಾಯ್ಕ ಉಪಾಧ್ಯಕ್ಷರು, ಮಂಜುನಾಥ ಪವಾರ್ ಕಾರ್ಯದರ್ಶಿ, ಕಿಶೋರ ರಾಣೆ ಜಂಟಿ ಕಾರ್ಯದರ್ಶಿ. ಗಜೇಂದ್ರ ಗಾಂದಲೆ ಹಾಗೂ ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಪ್ರೇಮಾನಂದ ಎಸ್.ಪರಬ, ದೈಹಿಕ ಶಿಕ್ಷಣ ಉಪನ್ಯಾಸಕ ಸಂಜಯ ಜಿ. ಗೌಡ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಶುಭವನ್ನು ಹಾರೈಸಿರುತ್ತಾರೆ.

Banner Ad