ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ: ತಾಲೂಕಿನ ಮಾವಳ್ಳಿಯ ದುರ್ಗಮ್ಮ ಕಾಳಮ್ಮ ದೇವಿಯರ ಜಾತ್ರಾ ಮಹೋತ್ಸವ 19 ಫೆಬ್ರವರಿ  ಬುಧವಾರದಿಂದ 27 ಫೆಬ್ರವರಿ ಗುರುವಾರದವರೆಗೆ ಒಟ್ಟು ಒಂಬತ್ತು ದಿನಗಳ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ.

ಮಾರ್ಚ್ 14ರಂದು ಪುನಃ ಪ್ರತಿಷ್ಠಾಪನೆ ನವಚಂಡಿ ಹವನ ಅನ್ನ ಸಂತರ್ಪಣೆ ಕಾರ್ಯಕ್ರಮ ತರುಗಲಿದೆ.

ಪ್ರತಿ ಐದು ವರ್ಷಕ್ಕೊಮ್ಮೆ ಜರುಗುವ ಜಾತ್ರಾ ಮಹೋತ್ಸವ ಇದಾಗಿದ್ದು ಈ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ.

9 ದಿನಗಳ ಕಾಲ ನಡೆಯಲಿರುವ ಈ ಜಾತ್ರಾ ಮಹೋತ್ಸವದಲ್ಲಿ ಪ್ರತಿದಿನವೂ ಅನ್ನ ಸಂಪರ್ಪಣೆ ನಡೆಯಲಿದೆ.