ಸುದ್ದಿ ಕನ್ನಡ ವಾರ್ತೆ

. ಜೋಯಿಡಾ:ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಬಾಮಣಗಿಯಲ್ಲಿ ೭0ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಾಡದೇವಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಪುಷ್ಪದಿಂದ ಅಲಂಕೃತ ಕರ್ನಾಟಕ ರಾಜ್ಯದ ನಕ್ಷೆಗೆ ಮೊಂಬತ್ತಿಯ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಕಿರಣ ಕುಮಾರ ನಾಯ್ಕ,ಸಹ ಶಿಕ್ಷಕಿಯರಾದ ವಂದನಾ ದೇಶಪಾಂಡೆ,ಪಿಲೋಮೀನ ನರೋನ,ಸುಮನಾ ಕನ್ನಡ ರಾಜ್ಯೋತ್ಸವದ ಆಚರಣೆಯ ಕುರಿತು ಸಂದರ್ಭೋಚಿತವಾಗಿ ಮಾತನಾಡಿದರು.ಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ಭಾಷೆಯ ಕುರಿತು ಭಾಷಣ,ಗೀತೆಗಳನ್ನು ಹಾಡುವ ಕಾರ್ಯಕ್ರಮ ನಡೆಯಿತು.