ಸುದ್ದಿ ಕನ್ನಡ ವಾರ್ತೆ
ಹೊನ್ನಾವರ:ತಾಲೂಕಿನ ವ್ಯಾಪ್ತಿಯ ಗೇರುಸೊಪ್ಪ ಸೂಳೆಮೂರ್ಕಿ ಕ್ರಾಸ್ ಹತ್ತಿರ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ,ಒರ್ವ ಸಾವನ್ನಪ್ಪಿ,15 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಭಟ್ಕಳಕ್ಕೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾರಿನ ನಡುವೆ ಸೂಳೆಮೂರ್ಕಿ ಕ್ರಾಸ್ ಹತ್ತಿರದ ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬಸ್ ಕಂದಕಕ್ಕೆ ಪಲ್ಟಿಯಾದ ಘಟನೆ ನಡೆದಿದೆ. ಸಾರಿಗೆ ಬಸ್ ನಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದು,ಬಸ್ ಪಲ್ಟಿಯಾದ ಕಾರಣ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ,ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಐದಕ್ಕೂ ಹೆಚ್ಚಿನ ಅಂಬ್ಯುಲೆನ್ಸ್ ತೆರಳಿ ಗಾಯಾಳುಗಳನ್ನು ಹೊನ್ನಾವರ ಸರಕಾರಿ ಆಸ್ಪತ್ರೆಗೆ ತಲುಪಿಸಲಾಗಿದೆ. ಅಪಘಾತ ಸಂಭವಿಸಿದ ಸ್ಥಳದ ಮಾರ್ಗದ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.ಹೊನ್ನಾವರ ಪೋಲಿಸರು,ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡ ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದಿಂದ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ,ಪೋಲೀಸರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
