ಸುದ್ದಿ ಕನ್ನಡ ವಾರ್ತೆ
ಕಾರವಾರ:ಕೈಗಾ ಅಣುಸ್ಥಾವರ ದಿಂದ ಮಲ್ಲಾಪುರ ಟೌನಶಿಪ್ ಕಡೆಗೆ ಕಾರ್ಮಿಕರು ಇದ್ದ ಟೆಂಪೋವೊಂದು ಪಲ್ಟಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಖಾಸಗಿ ಕಂಪೆನಿಯೊಂದರಲ್ಲಿ ರಾತ್ರಿ ಪಾಳಿ ಮುಗಿಸಿ,ಬೆಳಿಗ್ಗೆ ಟೌನಶಿಪ್ ಕಡೆಗೆ ಬರುತ್ತಿದ್ದ ಕಾರ್ಮಿಕರು ಇದ್ದ ಖಾಸಗಿ ಟೇಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಘಟನೆಯಲ್ಲಿ 16 ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ತಕ್ಷಣವೇ ಕಾರವಾರದ ಕ್ರಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಲ್ಲಾಪುರ ಠಾಣೆಯ ಪೋಲಿಸರು ಭೇಟಿ ನೀಡಿ ,ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
