ಸುದ್ದಿ ಕನ್ನಡ ವಾರ್ತೆ
. ಜೋಯಿಡಾ:ತಾಲೂಕಿನ ಕಾತೇಲಿ(ಕುಂಬಾರವಾಡ) ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಕೊಂದರ ಶಾಲೆಯಲ್ಲಿ ಸಡಗರ ಸಂಭ್ರಮದಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಈರಣ್ಣ ಪಗಡಿ ನಮ್ಮ ಕನ್ನಡ ನಾಡಿನ ಭಾಷೆ,ನೆಲ,ಜಲ,ಕರ್ನಾಟಕ ಏಕೀಕರಣದ ವಿಷಯದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಸ್ವಾಗತಿಸಿ, ನಿರೂಪಿಸಿ,ವಂದಿಸಿದರು.ಶಾಲೆಯ ವಿದ್ಯಾರ್ಥಿಗಳು ಕನ್ನಡದ ಗೀತೆಗಳನ್ನು ಹಾಡಿದರು.ಶಾಲಾ ಸುತ್ತಮುತ್ತಲಿನ ಗ್ರಾಮದ ಪರಿಸರದಲ್ಲಿ ಮೆರವಣಿಗೆ ನಡೆಯಿತು.ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು,ಪಾಲಕರು,ಪೋಷಕರು ಶಿಕ್ಷಕರು,ಅಂಗನವಾಡಿ ಕಾರ್ಯಕರ್ತೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು,ಪಾಲಕರು,ಪೋಷಕರು,ಅಂಗನವಾಡಿ ಕಾರ್ಯಕರ್ತೆ,ಮಕ್ಕಳು ಇದ್ದರು.
