ಸುದ್ದಿ ಕನ್ನಡ ವಾರ್ತೆ
ಶಿರಸಿ:ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯ ದೀನ ದಯಾಳ ಭವನದಲ್ಲಿ ಕನಕದಾಸ ಜಯಂತಿಯ ಆಚರಣೆಯನ್ನು ಮಾಡಲಾಯಿತು.

ನಗರ ಪ್ರಧಾನ ಕಾರ್ಯದರ್ಶಿ ಮಾಂತೇಶ್ ಹಾದಿಮನೆಯವರು ಕನಕದಾಸರ ಜೀವನ ಚರಿತ್ರೆ ಹಾಗೂ ಅವರ ವಿಚಾರಧಾರೆಗಳ ಬಗ್ಗೆ ಮಾತನಾಡಿದರು. ಕನಕದಾಸರ ನುಡಿಯಂತೆ ಕುಲ ಮತ್ತು ಜಾತಿ ಎಂದು ಭೇದ ಭಾವ ಮಾಡದೇ ರಾಷ್ಟ್ರ ನಿರ್ಮಾಣಕ್ಕಾಗಿ ಎಲ್ಲರೂ ಒಂದಾಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಿರಸಿ ನಗರ ಮಂಡಲ ಅಧ್ಯಕ್ಷರು ಆನಂದ ಸಾಲೇರ್, ಗ್ರಾಮೀಣ ಅಧ್ಯಕ್ಷರು ಉಷಾ ಹೆಗಡೆ, ಜಿಲ್ಲಾ ಕೋರ್ ಕಮಿಟಿ ಸದಸ್ಯರು ಆರ್‌ ಡಿ ಹೆಗಡೆ, ನಿಕಟಪೂರ್ವ ಅಧ್ಯಕ್ಷರು ರಾಜೇಶ್ ಶೆಟ್ಟಿ, ಜಿಲ್ಲಾ ಕೋಶಾಧ್ಯಕ್ಷರು ರಮಾಕಾಂತ್ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ ನಾಯ್ಕ, ಸಾಮಾಜಿಕ ಜಾಲತಾಣ ಸಂಚಾಲಕ ರವಿ ಶೆಟ್ಟಿ, ಕಾರ್ಯಾಲಯ ಕಾರ್ಯದರ್ಶಿ ರಾಮ ನಾಯ್ಕ, ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು, ಮಾತಾ ಭಗನಿಯರು, ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.