ಸುದ್ದಿ ಕನ್ನಡ ವಾರ್ತೆ
ಕಾರವಾರ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಕರ್ನಾಟಕದ ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈಗಾಗಲೇ ಕಳೆದ ನಾಲ್ಕೈದು ದಿನಗಳಿಂದ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಅಲ್ಲಲ್ಲಿ ಮಳೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.