ಸುದ್ದಿ ಕನ್ನಡ ವಾರ್ತೆ
ಜೊಯಿಡಾ :ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಶೈಕ್ಷಣಿಕ ಜಿಲ್ಲೆ ಶಿರಸಿ(ಉ.ಕ). ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಬಾಮಣಗಿ ಶಾಲೆಯಲ್ಲಿ ಸರ್ಕಾರದ ಸುತ್ತೋಲೆ ಅನ್ವಯ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೋಷಕರ- ಶಿಕ್ಷಕರ ಮಹಾಸಭೆಯು ಯಶಸ್ವಿಯಾಗಿ ಸಂಪನ್ನಗೊಂಡಿತು.
ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳ ಪ್ರಾರ್ಥನೆಯ ಮೂಲಕ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕಿಯಾದ ಸುಮನಾ ಗಣ್ಯರ ಜೊತೆ ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲರನ್ನು ಸ್ವಾಗತಿಸಿದರು. ಎಲ್ಲರಿಗೂ ಸಂವಿಧಾನದ ಪೀಠಿಕೆಯನ್ನು ಓದಿಸಲಾಯಿತು.
ಮಕ್ಕಳ ದಿನಾಚರಣೆಯ ನಿಮಿತ್ತ ಗಣ್ಯರ ಉಪಸ್ಥಿತಿಯಲ್ಲಿ ಮಕ್ಕಳು,ಶಿಕ್ಷಕರು,ಪಂಡಿತ ಜವಾಹರಲಾಲ ನೆಹರುರವರ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ,ಪುಷ್ಪ ನಮನ ಸಲ್ಲಿಸಿದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುಭಾಷ ಗಾಂವ್ಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸುಮಿತ್ರಾ ಬಾದವನಕರ,ತೋಪೋ ಗಾವಡ,ಆರ್.ಎನ್.ಚವ್ಹಾಣ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಪೋಷಕರ- ಶಿಕ್ಷಕರ ಮಹಾಸಭೆಯಲ್ಲಿ ಪೋಷಕರ ಪರಿಚಾಯತ್ಮಕ ಕಾರ್ಯಕ್ರಮ ನಡೆಯಿತು.ನಂತರ ಪೋಷಕರ-ಶಿಕ್ಷಕರ ಮಹಾಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು,ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳು,LNB,FLN ಬಗ್ಗೆ,ಮಕ್ಕಳ ಶೈಕ್ಷಣಿಕ ಚಟುವಟಿಕೆಯಲ್ಲಿ ಪೋಷಕರ ಜವಾಬ್ದಾರಿ ಬಗ್ಗೆ,ಶಾಲೆಯಲ್ಲಿನ ಭೌತಿಕ ಸೌಲಭ್ಯಗಳ ಕುರಿತು,2026-27 ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ಹೆಚ್ಚಳ,ಮಕ್ಕಳ ಹಕ್ಕುಗಳು,ಮಕ್ಕಳ ರಕ್ಷಣಾ ನೀತಿ,POCSO ಕಾಯ್ದೆ,RTI ಬಗ್ಗೆ ಮಾಹಿತಿ,ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದ ಇನ್ನಿತರ ವಿಷಯಗಳು ಚರ್ಚೆಯಾದವು.ಈ ಬಗ್ಗೆ ಹೆಚ್ಚಿನ ಮಾಹಿತಿಯ ವಿವರವನ್ನು ಮುಖ್ಯ ಶಿಕ್ಷಕರಾದ ಕಿರಣಕುಮಾರ ನಾಯ್ಕ ನೀಡಿದರು.
ಶಾಲಾ ಎಸ್.ಡಿ.ಎಮ್.ಸಿ ಸಮಿತಿಯವರು,ಪಾಲಕರು, ಪೋಷಕರು, ಶಿಕ್ಷಕರ, ಪಾಲ್ಗೊಳ್ಳುವಿಕೆಯಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು,ಮಕ್ಕಳಿಗೂ ಸ್ಪರ್ಧೆಗಳು ನಡೆದವು. ಈ ಸಭೆಯು ಶಾಲಾ ಪರಿಸರದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿತ್ತು. ಶಾಲಾ ಆಡಳಿತ ಮಂಡಳಿ,ಪಾಲಕರ,ಪೋಷಕರ ಸಹಕಾರದಿಂದ ಶಿಕ್ಷಕರು ರುಚಿಯಾದ ಸಿಹಿ ಊಟದ ವ್ಯವಸ್ಥೆ ಮಾಡಿಸಿದ್ಡರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಶಾಲೆಯ ಸಹ ಶಿಕ್ಷಕಿಯಾದ ಸುಮನಾ ಧನ್ಯವಾದಗಳನ್ನು ಸಲ್ಲಿಸಿದರು. ಸಹ ಶಿಕ್ಷಕಿಯರಾದ ವಂದನಾ ದೇಶಪಾಂಡೆ,ಪಿಲೋಮೀನ ನರೋನ ಸಹಕಾರ ನೀಡಿದರು.
