ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಕಾತೇಲಿ (ಕುಂಬಾರವಾಡಾ) ಗ್ರಾಮ ಪಂಚಾಯತ ವ್ಯಾಪ್ತಿಯ ಕಾಳಸಾಯಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಕಾಳಸಾಯಿ ಗ್ರಾಮದ ಅಂಗನವಾಡಿ ಕೇಂದ್ರದ ಸುತ್ತ ಮುತ್ತಲಿನ ಅಂಗನವಾಡಿ ಮಕ್ಕಳು,ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಪಾಲ್ಗೊಂಡು, ಮಕ್ಕಳೊಂದಿಗೆ ಉತ್ಸಾಹದಲ್ಲಿ ಆಟಗಳು, ವಿನೋದಭರಿತ ಕಾರ್ಯಕ್ರಮಗಳು ನಡೆದವು, ಪೋಷಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಕ್ಕಳಿಗೆ ಹರ್ಷೋಲ್ಲಾಸ ತುಂಬಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಸವಿತಾ, ಮುಕ್ತಾ, ನಂದಿತಾ ಮತ್ತು ಸುಲೋಚನ,ಅಂಗನವಾಡಿ ಸಹಾಯಕಿಯರು ಮಕ್ಕಳಿಗಾಗಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.ಊರಿನ ಹಿರಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಮಕ್ಕಳಿಗೆ ಪ್ರೋತ್ಸಾಹ ನೀಡಿ, ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
