Banner Ad

ಸುದ್ದಿ ಕನ್ನಡ ವಾರ್ತೆ

ಬೆಂಗಳೂರು:2026 ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ,ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು ಹಾಗೂ ಆನ್ ಲೈನ್ ಮುಖಾಂತರ ನೇರವಾಗಿ ನೋಂದಾಯಿಸುವ ಖಾಸಗಿ ಅಭ್ಯರ್ಥಿಗಳು ಮತ್ತು ಎಲ್ಲಾ ವಿಧದ ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ ಲೈನ್ ಮುಖಾಂತರ ನೋಂದಾಯಿಸಲು ಅವಧಿಯನ್ನು ದಿನಾಂಕ 20.11.2025ರ ವರೆಗೆ ನಿಗದಿಪಡಿಸಲಾಗಿತ್ತು. ಆದರೆ ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ಪುನಃ ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ವಿಸ್ತರಿಸಲಾಗಿದೆ.ಇದು ಅಂತಿಮ ವಿಸ್ತರಣೆಯಾಗಿದ್ದು,ಪುನಃ ದಿನಾಂಕ ವಿಸ್ತರಣೆಯನ್ನು ಮಾಡಲಾಗುವುದಿಲ್ಲ.ಈ ಸಂಬಂಧ ವಿಸ್ತರಿಸುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದ್ದು.ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ /ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು/ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸರಕಾರದ ಸುತ್ತೋಲೆ ಇದ್ದು ತಾಲೂಕು ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಎನ್ ಭಾರತಿ ಅವರುವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಮಾಧ್ಯಮದ ಮೂಲಕ ತಿಳಿಸಿರುತ್ತಾರೆ.

Banner Ad
Banner Ad