ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನವೆಂಬರ 26 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಧವಳೋ ಗಣೇಶ ಸಾವರ್ಕರ್, ಗ್ರಾಮ ಪಂಚಾಯತ ಸಿಬ್ಬಂದಿಗಳಾದ ನಾರಾಯಣ ಬಾಂದೇಕರ,ಪರಮೇಶ್ವರ ಸಿದ್ದಿ,ಮನವೆಲ್ ಎಫ್,ರಾಹುಲ ವಾಜ್,ರಜತ್,ಕ್ಲೇವನ್ ಎಫ್, ಮಂಜುನಾಥ ಮಿರಾಶಿ,ವಿಘ್ನೇಶ್ವರ ವೇಳಿಪ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಂವಿಧಾನ ದಿನ, ಭಾರತ – ಪ್ರಜಾಪ್ರಭುತ್ವದ ತಾಯಿ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವಕ್ಕಾಗಿ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಲು ಹಾಗೂ ಮೂಲ ಆಶಯಗಳನ್ನು ಅರಿಯಲು ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದಲಾಯಿತು.
